ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆಶಿಯನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಅಭಿನಂದಿಸಿದ್ದಾರೆ.

ʻಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವಿಟ್ಟರ್‌ನಲ್ಲಿ ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!