ಭಾರತದಲ್ಲಿ ಶೇ.75ರಷ್ಟು ವಯಸ್ಕರ ಲಸಿಕೆ ಪೂರ್ಣ: ಪ್ರಧಾನಿ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಶೇ. 75 ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ ಪಡೆದಿದ್ದಾರೆ. ಸಬ್ ಕಾ ಸಾಥ್, ಸಬ್ ಕಾ ಪ್ರಯಾಸ್ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ದೇಶದ ಜನತೆಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ. ಇಂಥದ್ದೊಂದು ಮೈಲಿಗಲ್ಲು ಸಾಧಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭಾರತದಲ್ಲಿ ಶೇ. 75 ರಷ್ಟು ವಯಸ್ಕರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತದಲ್ಲಿ ಕೊರೋನಾ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಧನ್ಯವಾದಗಳು, ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!