ಈ ರಾಜ್ಯಗಳ ವ್ಯಾಕ್ಸಿನ್ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೊ ಇರೋದಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಬ್ರವರಿಯಲ್ಲಿ ಗೋವಾ,ಮಣಿಪುರ, ಉತ್ತರಾಖಂಡ್, ಉತ್ತರಪ್ರದೇಶ ಹಾಗೂ ಪಂಜಾಬ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿ ಆಗಿದೆ.

ಈ ಕಾರಣದಿಂದ ಇನ್ನು ಮುಂದೆ ಕೊರೋನಾ ಲಸಿಕೆ ಪಡೆದವರಿಗೆ ನೀಡುವ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೊ ಇರುವುದಿಲ್ಲ. ಲಸಿಕೆ ಪ್ರಮಾಣ ಪತ್ರಕ್ಕೆ ಫೋಟೊ ಬಳಸದಂತೆ ಕೋವಿನ್ ಪೋರ್ಟ್‌ಲ್‌ನಲ್ಲಿ ಫಿಲ್ಟರ್‌ವೊಂದನ್ನು ಕೇಂದ್ರ ಆರೋಗ್ಯ ಸಚಿವಾಲಯ ಅಳವಡಿಸಿದೆ.

ಈ ಐದು ರಾಜ್ಯಗಳಲ್ಲಿ ಫೆ.10ರಿಂದ ಮಾರ್ಚ್ 7 ರವರೆಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮತಎಣಿಕೆ ನಡೆಯಲಿದೆ. ಚುನಾವಣಾ ಆಯೋಗ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಿಸುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!