ಬುಡಕಟ್ಟು ಸಮುದಾಯದ ಸಂಸ್ಕೃತಿ ಸಂಭ್ರಮಿಸುವ ‘ಆದಿ ಮಹೋತ್ಸವ’ಕ್ಕೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕ ಪದ್ಧತಿ, ಜನಜೀವನ, ಕಲೆ ಸಂಭ್ರಮಿಸುವ ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದು, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಜತೆಗಿದ್ದರು.

ಬುಡಕಟ್ಟು ಕಲೆ, ಸಾಂಪ್ರದಾಯಿಕ ಆಹಾರ ಪದ್ಧತಿ, ಕರಕುಶಲ, ವಾಣಿಜ್ಯ, ಸಂಸ್ಕೃತಿಯನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ, ಬುಡಕಟ್ಟು ಸಮುದಾಯ ನಿರ್ಮಿಸಿರುವ ಶ್ರೀ ಅನ್ನಕ್ಕೆ ಭಾರೀ ಬೇಡಿಕೆಯಿದೆ.

ಇಂದಿನಿಂದ ಫೆ.27ರವರೆಗೆ ದೆಹಲಿಯ ಮೇಜರ್ ಧ್ಯಾನ್‌ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಸ್ಟಾಲ್‌ಗಳಿವೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!