44ನೇ ಚೆಸ್​ ಒಲಿಂಪಿಯಾಡ್​ಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ತಮಿಳುನಾಡಿನ ಚೆನ್ನೈನಲ್ಲಿ 44ನೇ ಚೆಸ್ ಒಲಿಂಪಿಯಾಡ್​ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.
ಈ ಮೂಲಕ ಮುಂದಿನ ಎರಡು ವಾರಗಳ ಕಾಲ ಚದುರಂಗದ ಚಮತ್ಕಾರ ನಡೆಯಲಿದ್ದು, ಇದೇ ಮೊದಲ ಬಾರಿ ಭಾರತದಲ್ಲಿ ಅಂತಾರಾಷ್ಟ್ರೀಯ ಚೆಸ್​​ ಕ್ರೀಡಾಕೂಟ ಆಯೋಜನೆಗೊಂಡಿದೆ.

ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 44ನೇ ಚೆಸ್‌ ಒಲಿಂಪಿಯಾಡ್‌ಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಜವಾಹರ್‌ ಲಾಲ್‌ ನೆಹರು ಕ್ರೀಡಾಂಗಣದಲ್ಲಿ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್​, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಈ ಟೂರ್ನಿಯಲ್ಲಿ ರಷ್ಯಾ, ಚೀನಾ ಮತ್ತು ಪಾಕಿಸ್ತಾನ ಗೈರು ಹಾಜರಾಗಿವೆ. ಹೀಗಾಗಿ, ಭಾರತಕ್ಕೆ ಹೆಚ್ಚಿನ ಪದಕ ಹರಿದು ಬರುವ ಸಾಧ್ಯತೆ ಇದೆ.

98 ವರ್ಷಗಳ ಇತಿಹಾಸ ಇರುವ ಚೆಸ್‌ ಒಲಿಂಪಿಯಾಡ್‌ನ 44ನೇ ಆವೃತ್ತಿ ಆಗಸ್ಟ್‌ 10ರವರೆಗೆ ಚೆನ್ನೈನ ಮಲ್ಲಪುರಮ್‌ನ ಪಂಚತಾರಾ ಹೋಟೆಲ್‌ನಲ್ಲಿ ನಡೆಯುತ್ತಿದೆ. 61 ದೇಶಗಳ 350 ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಭಾರತದಿಂದಲೂ ಅನೇಕ ಪ್ರತಿಭೆಗಳು ಇದರಲ್ಲಿ ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!