May 11, 2026
Monday, May 11, 2026
spot_img

ಇಂದಿನಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಮತ್ತು ಭದ್ರತಾ ಸಂಬಂಧಗಳನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ. ಹಾಗೇ ಆರ್ಥಿಕ ಮತ್ತು ನಾವೀನ್ಯತೆ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇದು ಆಗ್ನೇಯ ಏಷ್ಯಾದ ರಾಷ್ಟ್ರಕ್ಕೆ ಅವರ ಮೂರನೇ ಭೇಟಿಯಾಗಿದ್ದು, 2024ರ ಆಗಸ್ಟ್​ನಲ್ಲಿ ಭಾರತ -ಮಲೇಷ್ಯಾ ದ್ವಿಪಕ್ಷೀಯ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಹೆಚ್ಚಿಸಿದ ಬಳಿಕ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

ಪ್ರವಾಸಕ್ಕೂ ಮುನ್ನ ನಿರ್ಗಮನ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ಮೋದಿ, ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಐತಿಹಾಸಿಕ ಸಂಬಂಧಗಳು ಸ್ಥಿರವಾದ ಪ್ರಗತಿಯನ್ನು ಕಾಣುತ್ತಿವೆ. ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನನ್ನ ಚರ್ಚೆಗಳನ್ನು ಮತ್ತು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವೃದ್ಧಿಸಲು ಸಹಾಯ ಮಾಡುತ್ತದೆ ಎಂದು ನಂಬಿರುವೆ. ನಮ್ಮ ರಕ್ಷಣೆ ಮತ್ತು ಭದ್ರತಾ ಸಂಬಂಧಗಳನ್ನು ಗಾಢವಾಗಿಸುವ, ಆರ್ಥಿಕ ಮತ್ತು ನಾವೀನ್ಯತೆ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !