ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುವನಂತಪುರ ಸೆಂಟ್ರಲ್ ಮತ್ತು ಕಾಸರಗೋಡು ನಡುವಿನ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.
ಕೇರಳಕ್ಕೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ವಿವಿಧ ಯೋಜನೆಗಳಿಗೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ. ಇಂದು ತಿರುವನಂತಪುರದ ಸೆಂಟ್ರಲ್ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಕೊಟ್ಟಿದ್ದಾರೆ.
ಇದೀಗ ಚಾಲನೆಗೊಂಡ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಹೀಗೆ 11 ಜಿಲ್ಲೆಗಳ ನಡುವೆ ಚಲಿಸಲಿದೆ.
ಪ್ರಧಾನಿ ಮೋದಿ ಇಂದು ಒಟ್ಟು 3,200 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.