ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 12ರಂದು ಪ್ರಧಾನಿ ಮೋದಿ ಮಂಡ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ ಮಾಡಲು ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ವೇಳೆ ರೋಡ್ಶೋ ಕೂಡ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಡ್ರೋನ್ ಹಾರಾಟ ನಿಷೇಧ ಮಾಡಲಾಗಿದೆ.
ಪ್ರಧಾನಿ ಮೋದಿ ಮೆಗಾ ರೋಡ್ ಶೋ ಹಿನ್ನೆಲೆ 15 ಕಿ.ಮೀವರೆಗೂ ಹೆಲಿಕ್ಯಾಮ್, ಡ್ರೋನ್ ಹಾರಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಭದ್ರತಾ ಹಿತದೃಷ್ಟಿಯಿಂದ ಮಾನವ ರಹಿತ ಎಲೆಕ್ಟ್ರಿಕಲ್ ವಸ್ತು ಹಾಗೂ ಹೆಲಿಕಾಪ್ಟರ್ ಹಾರಾಟಕ್ಕೂ ನಿಷೇಧ ಹೇರಲಾಗಿದೆ.