ಪ್ರಧಾನಿ ಮೋದಿ ಸರಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ: ಹಜ್‌ ಸಮಿತಿಯ ನೂತನ ಅಧ್ಯಕ್ಷೆ ಕೌಸರ್ ಜಹಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಹಜ್‌ ಸಮಿತಿಯ (Delhi Haj Committee) ನೂತನ ಅಧ್ಯಕ್ಷೆ ಕೌಸರ್ ಜಹಾನ್ ಪ್ರಧಾನಿ ಮೋದಿಯವರ (Narendra Modi) ಕಾರ್ಯಗಳನ್ನು ಹೊಗಳಿದ್ದಾರೆ.
ಪ್ರಧಾನಿ ಮೋದಿ ಅವರ ಸರ್ಕಾರ ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದೆ ಎಂದು ಹೇಳಿದ್ದಾರೆ.

ತ್ರಿವಳಿ ತಲಾಖ್ (Triple Talaq) ನಿಷೇಧದ ನಂತರ ಮುಸ್ಲಿಂ ಮಹಿಳೆಯರು ಸುರಕ್ಷಿತರಾಗಿದ್ದಾರೆ. ಹಜ್‌ಗೆ ಹೋಗುವವರ ಸಮಸ್ಯೆ ನಿವಾರಿಸುವ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದರಂತೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿ ಹಜ್ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕೌಸರ್ ಜಹಾನ್ ಆಯ್ಕೆಯಾಗಿದ್ದಾರೆ. ದೆಹಲಿಯ ಇತಿಹಾಸದಲ್ಲಿ ಮಹಿಳೆಯೊಬ್ಬರು ಸಮಿತಿ ಮುಖ್ಯಸ್ಥರಾಗಿ ಆಯ್ಕೆಯಾಗಿರುವುದು ಇದು ಎರಡನೇ ಬಾರಿ.

ನೂತನ ಅಧ್ಯಕ್ಷರ ಆಯ್ಕೆಗಾಗಿ ಸೋಮವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸಮಿತಿಯ ಹತ್ತು ಸದಸ್ಯರು ಭಾಗವಹಿಸಿದ್ದರು. ಅವರಲ್ಲಿ ಮೊಹಮ್ಮದ್ ಸಾದ್ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಜಹಾನ್ ಅವರಿಗೆ ಬೆಂಬಲ ಸೂಚಿಸಿದರು. ತಮ್ಮ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂದು ನಿರೀಕ್ಷಿಸಿದ್ದ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಈ ಬೆಳವಣಿಗೆ ಅಚ್ಚರಿಯುಂಟು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!