ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿದೆ.
ವಾದ, ಪ್ರತಿವಾದಗಳನ್ನು ಆಲಿಸಲಾಗಿದೆ. ತೀರ್ಪು ಕಾಯ್ದಿರಿಸಲಾಗಿದೆ ಎಂದು ನ್ಯಾಯಮೂರ್ತಿ ಸಚಿನ್ ದತ್ತ ಅವರು ಹೇಳಿದ್ದಾರೆ.
ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಆದೇಶವನ್ನು ರದ್ದುಗೊಳಿಸಲು ಅರ್ಹವಾಗಿದೆ ಎಂದು ದೆಹಲಿ ವಿವಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.
ವಿಶ್ವವಿದ್ಯಾಲಯವು ದಾಖಲೆಯನ್ನು ನ್ಯಾಯಾಲಯಕ್ಕೆ ತೋರಿಸಲು ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. 1978 ರಲ್ಲಿ ಕಲಾ ಪದವಿ ಪಡೆದಿದ್ದು ಎಂದು ಮೆಹ್ತಾ ತಿಳಿಸಿದ್ದಾರೆ.
ನೀರಜ್ ಎಂಬವರು ಆರ್‌ಟಿಐ ಅರ್ಜಿ ಸಲ್ಲಿಸಿದ ನಂತರ, ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಡಿಸೆಂಬರ್ 21, 2016 ರಂದು, 1978 ರಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಬೇಕು ಎಂದು ಆದೇಶಿಸಿತ್ತು. ಇದೇ ವರ್ಷ ಪ್ರಧಾನಿ ಮೋದಿ ಕೂಡ ಉತ್ತೀರ್ಣರಾಗಿದ್ದಾರೆ ಎನ್ನಲಾಗಿದೆ. ಜನವರಿ 23, 2017 ರಂದು ದೆಹಲಿ ಹೈಕೋರ್ಟ್, ಸಿಐಸಿ ಆದೇಶಕ್ಕೆ ತಡೆ ನೀಡಿತ್ತು.