ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುದ್ಧಪೀಡಿತ ಉಕ್ರೇನ್ ನಿಂದ ಭಾರತಕ್ಕೆ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಇಂದು ಸಂವಾದ ನಡೆಸಿದರು.
ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳ ಗುಂಪಿನೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ,ಉಕ್ರೇನ್ ನಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ವಿವಿಧ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು. ಈ ವೇಳೆ ವಿದ್ಯಾರ್ಥಿಗಳು ಕೂಡ ತಮ್ಮ ಅನುಭವಗಳನ್ನ ಹಂಚಿಕೊಂಡರು.
ಈಗಾಗಲೇ ‘ಆಪರೇಶನ್ ಗಂಗಾ’ ಮೂಲಕ ಸಾವಿರಾರು ಭಾರತೀಯರು ತಮ್ಮ ನಾಡಿಗೆ ಮರಳಿದ್ದು, ಇನ್ನೂ ಅನೇಕರನ್ನು ಕರೆತರುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರದ ಟೀಮ್ ಕೆಲಸ ಮಾಡುತ್ತಿದ್ದಾರೆ.