ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಇಂದು ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಹತ್ವದ ಸಭೆ ನಡೆಸಿದ್ದಾರೆ.
ಆಯಾ ರಾಜ್ಯ ಮುಖ್ಯಮಂತ್ರಿಗಳು ತಮ್ಮ ಆಡಳಿತದಲ್ಲಿನ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ಯೋಜನೆಗಳ ಕಾರ್ಯಗತ ಕುರಿತ ವರದಿ ಸಲ್ಲಿಸಿದ್ದಾರೆ. ಬಳಿಕ ಮೋದಿ ಆಡಳಿತ ಚುರುಕುಗೊಳಿಸಲು ಮಹತ್ವದ ಸಲಹೆ ನೀಡಿದ್ದಾರೆ.
.ಎಲ್ಲಾ ವರ್ಗದ ಜನರು ವಿಶ್ವಾಸಗಳಿಸಲು ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. ಇದೇ ವೇಳೆ ಅಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಚರ್ಚೆ ನಡೆಸಲಾಗಿದೆ.
ಈ ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಉತ್ತರಖಂಡ್ ಸಿಎಂ ಪುಷ್ಕರ್ ಸಿಂಗ್ ಧಮಿ, ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ, ನಾಗಾಲ್ಯಾಂಡ್ ಸಿಎಂ ನೆಫಿಯೋ ರಿಯೋ, ತ್ರಿಪುರಾ ಸಿಎಂ ಮಾನಿಕ್ ಶಾ, ಗುಜರಾತ್ ಸಿಎಂ ಭುಪೇಂದ್ರ ಪಟೇಲ್, ಗೋವಾ ಸಿಎಂ ಪ್ರಮೋದ್ ಸಾವಂತ್ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇವರ ಜೊತೆ ಹಲವು ಮೈತ್ರಿ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಜರಿದ್ದರು. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೆವೇಂದ್ರ ಫಡ್ನವಿಸ್ ಸೇರಿಂತೆ ಇತರ ಕೆಲ ಉಪ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.
2024ರ ಲೋಕಸಭಾ ಚುನಾವಣೆ, 2023ರಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಚುನಾವಣೆ ನಡೆಯಲಿದೆ. ಈ ವೇಳೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರ ಹಿಡಿಯಲು ಹಾಗೂ ಆಡಳಿತ ವಿಸ್ತರಿಸಲು ಮಾಸ್ಟರ್ ಪ್ಲಾನ್ ರೆಡಿಯಾಗುತ್ತಿದೆ. ಎಲ್ಲಾ ರಾಜ್ಯಗಳ ವರದಿ ಪರಿಶೀಲಿಸಿದ್ದಾರೆ. ಹರ್ ಘರ್ ತಿರಂಗಾ ಆಂದೋಲನ ಯಶಸ್ವಿಯಾಗಲು ಎಲ್ಲಾ ಕಾರ್ಯಕ್ರಮ ರೂಪಿಸುವಂತೆ ಮೋದಿ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!