ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾತ್ಮ ಗಾಂಧಿಯವರ ಗೌರವಾರ್ಥ  ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.  ಇನ್ನು ಸ್ವಚ್ಛ ಭಾರತವು ಹಂಚಿಕೆಯ ಜವಾಬ್ದಾರಿಯಾಗಿದೆ ಮತ್ತು ಪ್ರತಿಯೊಂದು ಪ್ರಯತ್ನವೂ ಮಹತ್ವದ್ದಾಗಿದೆ ಎಂದು ಪ್ರಧಾನಿ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿ ಮೋದಿ, ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಒಂದು ಪ್ರಮುಖ ಸ್ವಚ್ಚತಾ ಉಪಕ್ರಮಕ್ಕಾಗಿ ಒಗ್ಗೂಡಬೇಕು. ಸ್ವಚ್ಛ ಭಾರತವು ಹಂಚಿಕೆಯ ಜವಾಬ್ದಾರಿಯಾಗಿದೆ ಮತ್ತು ಪ್ರತಿಯೊಂದು ಪ್ರಯತ್ನವೂ ಮಹತ್ವದ್ದಾಗಿದೆ. ಸ್ವಚ್ಛ ಭವಿಷ್ಯವನ್ನು ತರುವ ಈ ಉದಾತ್ತ ಪ್ರಯತ್ನದಲ್ಲಿ ಸೇರಿಕೊಳ್ಳಬೇಕು ಎಂದಿದ್ದಾರೆ.

ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ!
ಅಕ್ಟೋಬರ್ 1ರಂದು ಬೆಳಿಗ್ಗೆ ಸ್ವಚ್ಛತೆಯ ಬಗ್ಗೆ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗುವುದೆಂದು ಪ್ರಧಾನಿ ಮೋದಿ ಈ ಹಿಂದೆ ‘ಮನ್ ಕಿ ಬಾತ್’ ನ 105 ನೇ ಸಂಚಿಕೆಯಲ್ಲಿ ಹೇಳಿದ್ದರು. ಎಲ್ಲಾ ದೇಶವಾಸಿಗಳು ಈ ಕಾರ್ಯಕ್ರಮಕ್ಕೆ ಸಮಯ ತೆಗೆದುಕೊಳ್ಳಬೇಕು ಮತ್ತು ಅಭಿಯಾನದಲ್ಲಿ ಭಾಗವಹಿಸಬೇಕು. ಬೀದಿ, ನೆರೆಹೊರೆ ಅಥವಾ ಉದ್ಯಾನವನ, ನದಿ, ಸರೋವರ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲೂ ಸ್ವಚ್ಛತಾ ಅಭಿಯಾನಕ್ಕೆ ಸೇರಬಹುದು. ಗಾಂಧಿ ಜಯಂತಿಯ ಸಂದರ್ಭ ಈ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ‘ಒನ್ ಡೇಟ್, ಒನ್ ಅವರ್, ಟುಗೆದರ್’ ಎಂದು ಹೆಸರಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!