ಪ್ರಧಾನಿ ಮೋದಿಯಿಂದ ದೇಶದ ಘನತೆ, ಪ್ರಜಾಪ್ರಭುತ್ವದ ನಾಶ: ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಜೈಪುರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರುವಂತೆ ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ, ಹಣದುಬ್ಬರ, ಅಸಮಾನತೆ, ದೌರ್ಜನ್ಯ ಹೆಚ್ಚಾಗಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ, ಮೋದಿ ಅವರು ದೇಶದ ಘನತೆ ಮತ್ತು ಅದರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!