ಪ್ರಧಾನಿ ಮೋದಿ ಅವರೇ ರೋಡ್ ಶೋ ಮುಂದೂಡಿ: ಎಚ್ ಡಿ ಕುಮಾರಸ್ವಾಮಿ ಒತ್ತಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ರೋಡ್ ಶೋವನ್ನು ಮುಂದೂಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪರೀಕ್ಷೆ ಕೋರ್ಸ್ ಪ್ರವೇಶಕ್ಕೆ ದೇಶಾದ್ಯಂತ ನಡೆಸುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಇದೇ ಮೇ 7 ರಂದು ಭಾನುವಾರ ನಡೆಯಲಿದೆ. ಆದರೆ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಲ್ಲಿ ಸಂಚಾರ ಆತಂಕ ಎದುರಾಗಿದ್ದು, ಅದನ್ನು ದೂರ ಮಾಡಲು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ದಿನವೇ ಚುನಾವಣೆ ಸಂಬಂಧ ಪ್ರಧಾನಿ ಮೋದಿಯವರ ರೋಡ್ ಶೋ ನಡೆಯಲಿದೆ. ಅಂದು ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗದಂತೆ ರೋಡ್ ವೇಳಾಪಟ್ಟಿ ಬದಲಿಸಿಕೊಳ್ಳಬೇಕೆಂದು ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋನಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ.ಈ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದು ಹೇಳಿದರು.

ದೇಶದ ಪ್ರಧಾನಮಂತ್ರಿಗಳು ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡುವುದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ತು ಕಾಳಜಿ ಇದ್ದರೆ ಮೇ 7ರಂದು ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ರೋಡ್ ಶೋ ಅನ್ನು ಮುಂದೂಡುವುದು ಒಳ್ಳೆಯದು ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!