ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಯಾನಾ ಸರ್ಕಾರ ಅತ್ಯುನ್ನತ ಗೌರವವಾದ `ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ ನೀಡಿ ಗೌರವಿಸಿದೆ.

ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಮೋದಿ ಬುಧವಾರ (ನ.20) ಗಯಾನಾಕ್ಕೆ ಭೇಟಿ ನೀಡಿದ್ದು, 56 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.

ಇಂದು ಜಾರ್ಜ್‌ಟೌನ್‌ನ ಸ್ಟೇಟ್ ಹೌಸ್‌ನಲ್ಲಿ ನಡೆಯುತ್ತಿರುವ ಭಾರತ-ಕೆರಕಮ್ (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಗಯಾನಾದ ಅಧ್ಯಕ್ಷ ಮೊಹಮದ್ ಇರ್ಫಾನ್ ಅಲಿ ಅವರು ಪ್ರಧಾನಿ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದವರ ಪೈಕಿ ಪ್ರಧಾನಿ ಮೋದಿ ನಾಲ್ಕನೇ ವಿದೇಶಿ ನಾಯಕರಾಗಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ಗಯಾನಾಕ್ಕೆ ನೀಡಿದ ಈ ಭೇಟಿಯು ಭಾರತದ ಜೊತೆಗಿನ ಸಂಬಂಧವನ್ನು ಬಲಪಡಿಸುತ್ತದೆ. ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದು, ಈ ಪ್ರಶಸ್ತಿ 140 ಕೋಟಿ ಭಾರತೀಯರಿಗೆ ಸಲ್ಲುವ ಗೌರವವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷ ಇರ್ಫಾನ್ ಅಲಿ ಅವರೊಂದಿಗಿನ ಈ ಸಂಬಂಧ ಭಾರತ ಹಾಗೂ ಗಯಾನಾ ದೇಶವನ್ನು ಎತ್ತರಕ್ಕೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಭಾರತವು ಗಯಾನಾದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಿದ್ಧವಾಗಿದೆ. ಅಸಂಖ್ಯಾತ ಜಲಪಾತಗಳು ಮತ್ತು ಸರೋವರಗಳಿಂದ ಕೂಡಿರುವ ಗಯಾನಾವನ್ನು `ದಿ ಲ್ಯಾಂಡ್ ಆಫ್ ಮೆನಿ ವಾಟರ್ಸ್’ ಎಂದು ಕರೆಯಲಾಗುತ್ತದೆ. ಗಯಾನಾ ನದಿಗಳು ಇಲ್ಲಿನ ಜನರ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಹಾಗೆಯೇ ಭಾರತದ ಗಂಗಾ, ಯಮುನಾ ಮತ್ತು ಬ್ರಹ್ಮಪುತ್ರ ನದಿಗಳು ನಮ್ಮ ಪ್ರಾಚೀನ ನಾಗರಿಕತೆಯ ಜನ್ಮಸ್ಥಳವಾಗಿದೆ. ಇದು ಭಾರತ ಮತ್ತು ಗಯಾನಾ ನಡುವೆ ಸಾಮ್ಯತೆಗಳ ಅನೇಕ ಉದಾಹರಣೆಗಳಿವೆ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!