ಕಾಲಿಗೆ ಬೀಳಲು ಮುಂದಾದ ನಾಯ್ಡುರನ್ನು ತಬ್ಬಿಕೊಂಡ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಎನ್‌.ಚಂದ್ರಬಾಬು ನಾಯ್ಡು ಅವರು ಬುಧವಾರ (ಜೂನ್‌ 12) ಪ್ರಮಾಣವಚನ ಸ್ವೀಕರಿಸಿದ್ದಾರೆ.ಈ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಾಕ್ಷಿಯಾಗಿದ್ದರು.

ಈ ವೇಳೆ ಪ್ರಧಾನಿ ಮೋದಿ ಅವರನ್ನು ವೇದಿಕೆಗೆ ಸ್ವಾಗತಿಸಿದ ಚಂದ್ರಬಾಬು ನಾಯ್ಡು ಅವರು, ಪ್ರಧಾನಿಗೆ ಹೂಗುಚ್ಛ ನೀಡಿದರು. ಇದಾದ ಬಳಿಕ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಮುಂದಾದರು.

ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ನಾಯ್ಡು ಅವರು ಮೋದಿ ಅವರಿಗಿಂತ ಒಂದು ವರ್ಷ ದೊಡ್ಡವರು. ಹೀಗಿದ್ದರೂ ಮೋದಿ ಅವರ ಮೇಲಿನ ಗೌರವದಿಂದಾಗಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಮುಂದಾದರು. ಆದರೆ, ಇದಕ್ಕೆ ಮೋದಿ ಅವರು ಅವಕಾಶ ಕೊಡದೆ, ಚಂದ್ರಬಾಬು ನಾಯ್ಡು ಅವರನ್ನು ತಬ್ಬಿಕೊಂಡು, ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಪ್ರಮಾಣವಚನ ಸ್ವೀಕರಿಸಿದರು.

https://x.com/ANI/status/1800772379678740701?ref_src=twsrc%5Etfw%7Ctwcamp%5Etweetembed%7Ctwterm%5E1800772379678740701%7Ctwgr%5E80c00ec386f438071c67a403f7a5e68269b48f7f%7Ctwcon%5Es1_&ref_url=https%3A%2F%2Fvistaranews.com%2Fnational%2Fchandrababu-naidu-tries-to-touch-pm-narendra-modis-feet-watch-the-video%2F672645.html

ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ನಟ, ಪವನ್‌ ಕಲ್ಯಾಣ್‌ ಸಹೋದರ ಚಿರಂಜೀವಿ, ತಮಿಳು ನಟ ರಜನಿಕಾಂತ್‌, ನಂದಮೂರಿ ಬಾಲಕೃಷ್ಣ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!