ಕೇರಳದಲ್ಲಿ ಪ್ರಧಾನಿ ಮೋದಿ: ರೋಡ್‌ಶೋ ನಲ್ಲಿ ಹೂಮಳೆಗರೆದು ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ (Kerala) ತ್ರಿಶೂರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರೋಡ್ ಶೋ ನಡೆಸಿದ್ದಾರೆ.

ಬಿಜೆಪಿ ರಾಜ್ಯ ಘಟಕ ಆಯೋಜಿಸಿರುವ ಎರಡು ಲಕ್ಷಕ್ಕೂ ಅಧಿಕ ಮಹಿಳೆಯರು ಭಾಗವಹಿಸುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ ರೋಡ್‌ಶೋ ನಡೆಸಿದರು.

ಪ್ರಧಾನಿಯವರನ್ನು ಸ್ವಾಗತಿಸಲು ಪಟ್ಟಣವನ್ನು ಬ್ಯಾನರ್ ಮತ್ತು ಹೋರ್ಡಿಂಗ್‌ಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ಮೋದಿ ಅವರ ದರ್ಶನಕ್ಕಾಗಿ ಮಹಿಳೆಯರು ಕಾದು ಕುಳಿತಿರುವುದು ಕಂಡುಬಂತು.

ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಯಶಸ್ವಿಯಾಗಿ ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಲು ‘ಸ್ತ್ರೀ ಶಕ್ತಿ ಮೋದಿಕ್ಕ್ ಒಪ್ಪಂ’ (ಮೋದಿಯೊಂದಿಗೆ ಸ್ತ್ರೀ ಶಕ್ತಿ ) ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂಗನವಾಡಿ ಶಿಕ್ಷಕಿಯರು , ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಕಲಾವಿದರು, ಎಂಜಿಎನ್‌ಆರ್‌ಇಜಿಎ ಮತ್ತು ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ವಿವಿಧ ಹಿನ್ನೆಲೆಯ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here