Sunday, June 4, 2023

Latest Posts

ರಾಜ್ಯ ಚುನಾವಣಾ ಅಖಾಡದಲ್ಲಿ ಪ್ರಧಾನಿ ಮೋದಿ: ನಾಳೆಯೂ ನಡೆಸಲಿದ್ದಾರೆ ಭರ್ಜರಿ ಪ್ರಚಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಚುನಾವಣಾ ಅಖಾಡಕ್ಕೆ ಪ್ರಧಾನಿ ಮೋದಿ ಇಳಿದಿದ್ದು, ಶನಿವಾರ ಬೀದರ್​ಗೆ ಆಗಮಿಸಿದ್ದ ಪ್ರಧಾನಿ ಮೋದಿಹುಮ್ನಾಬಾದ್​, ವಿಜಯಪುರ, ಕುಡಚಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಿಮಾಗಡಿ ರಸ್ತೆಯ ನೈಸ್​ ಜಂಕ್ಷನ್​ನಿಂದ ಸುಮನಹಳ್ಳಿವರೆಗೆ ಬೃಹತ್​ ರೋಡ್​ ಶೋ ಮಾಡಿದರು.

ಇನ್ನು ನಾಳೆಯೂ ಪ್ರಧಾನಿ ಮೋದಿ ರಾಜ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಭಾನುವಾರ ಬೆಳಗ್ಗೆ 10.35ಕ್ಕೆ ರಾಜಭವನದಿಂದ ಹೆಲಿಪ್ಯಾಡ್​ಗೆ ತೆರಳಲಿದ್ದಾರೆ. ಬಳಿಕ ಹಳೇ ಮೈಸೂರು ಭಾಗದಲ್ಲಿ ಪ್ರಚಾರ, ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಮೈಸೂರಿನಲ್ಲಿ ರೋಡ್​ ಶೋ ನಡೆಸಲಿದ್ದಾರೆ.ಆ ಬಳಿಕ ಸಂಜೆ 7 ಗಂಟೆಗೆ ಸೇನಾ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!