Sunday, December 3, 2023

Latest Posts

ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.

ಈಗಾಗಲೆ ಸಂಚಾರ ಆರಂಭಗೊಂಡಿರುವ ಕೆ.ಆರ್.ಪುರಂ- ಬೈಯಪ್ಪನಹಳ್ಳಿ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ಮಾರ್ಗಗಳ ಮೆಟ್ರೋ ಸೇವೆಯನ್ನು ಪ್ರಧಾನಿ ಮಂತ್ರಿಗಳು ಇಂದು ಅಧಿಕೃತವಾಗಿ ಉದ್ಘಾಟಿಸಿದರು.

ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದು,
ರಾಜ್ಯ ಹಾಗೂ ಬೆಂಗಳೂರು ಜನತೆ ಪರವಾಗಿ ಪ್ರಧಾನಿಯವರಿಗೆ ಕನ್ನಡದಲ್ಲೇ ಧನ್ಯವಾದ ತಿಳಿಸಿದರು.

ಈ ವೇಳೆ ಕನ್ನಡದಲ್ಲೇ ಮಾತು ಮುಂದುವರಿಸಿದ ಸಿಎಂ, ‘ನೂತನ ಮೆಟ್ರೋ ಮಾರ್ಗದಿಂದ ಜನರಿಗೆ ಮತ್ತಷ್ಟು ಅನುಕೂಲವಾಗಲಿದೆ. ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ 5,630 ಕೋಟಿ ರೂ. ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಕೈಗೊಂಡಿದೆ. ಎರಡು ಹಂತದಲ್ಲಿ ಸುಮಾರು 74 ಕಿ.ಮೀ. ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!