Sunday, November 27, 2022

Latest Posts

ಉಜ್ಜಯಿನಿಯಲ್ಲಿ ಮಹಾಕಾಲ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾಕಾಲ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಉದ್ಘಾಟಿಸಿದರು.

ಕಾರಿಡಾರ್ ಗೆ 856 ಕೋಟಿ ರೂ ವೆಚ್ಚವಾಗಲಿದ್ದು, ಮೊಲ ಹಂತದಲ್ಲಿ 350 ಕೋಟಿ ರೂ ವೆಚ್ಚದಲ್ಲಿ  ನಿರ್ಮಾಣವಾಗಲಿದೆ.

ದೇಶದಲ್ಲಿರುವ 12 ಜ್ಯೋತಿರ್ಲಿಂಗಗಳ ಪೈಕಿ ಉಜ್ಜಯಿನಿಯ ಮಹಾಕಾಲ ದೇವಾಲಯವೂ ಒಂದಾಗಿದೆ.ಮೋದಿ ಈ ಐತಿಹಾಸಿಕ ಮಹಾಕಾಲ ಕಾರಿಡಾರ್ ಉದ್ಘಾಟಿಸಿದ್ದಾರೆ. ಈ ವೇಳೆ ಮಂತ್ರಘೋಷಗಳು ಮೊಳಗಿತು. ಬ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕಾರಿಡಾರ್ ಮಾಹಿತಿ ನೀಡಿದರು.

ಮಹಾಕಾಲ ಕಾರಿಡಾರ್ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ ಮಹಾಕಾಲ ಸನ್ನಿದ್ಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

900 ಮೀ. ಉದ್ದದ ಕಾರಿಡಾರ್‌
ಮಹಾಕಾಲ ದೇಗುಲದ ಸುತ್ತ ವಿಶಾಲವಾದ ಕಾರಿಡಾರ್‌ ನಿರ್ಮಿಸಲಾಗಿದೆ. ಇದರಿಂದ ಭಕ್ತರಿಗೆ ಆರಾಮವಾಗಿ ದೇಗುಲಕ್ಕೆ ಸಾಗಿಬರಲು ಅನುಕೂಲವಾಗಲಿದೆ. ಇದು ಸುಮಾರು 900 ಮೀ. ಉದ್ದದ ಕಾರಿಡಾರ್‌ ಆಗಿದ್ದು, ದೇಶದ ಅತಿದೊಡ್ಡ ಕಾರಿಡಾರ್‌ಗಳಲ್ಲಿ ಒಂದಾಗಿದೆ. ಇದು 2 ಪ್ರಮುಖ ಗೇಟ್‌ವೇ- ನಂದಿ ದ್ವಾರ ಹಾಗೂ ಪಿನಾಕಿ ದ್ವಾರವನ್ನು ಒಳಗೊಂಡಿದೆ. ಮೇಲ್ಭಾಗದಲ್ಲಿ ತ್ರಿಶೂಲ ಶೈಲಿಯ ವಿನ್ಯಾಸವಿರುವ ಹಾಗೂ ಶಿವನ ಮುದ್ರೆಗಳಿರುವ 108 ಅಲಂಕೃತ ಮರಳುಗಲ್ಲುಗಳ ಸ್ತಂಭಗಳಿಂದ ಕಾರಿಡಾರ್‌ ಅನ್ನು ಅಲಂಕರಿಸಲಾಗಿದೆ. ಇದು ದೇವತೆಗಳ ಕಲಾತ್ಮಕ ಶಿಲ್ಪ ಹಾಗೂ ಪ್ರಕಾಶಿತ ಭಿತ್ತಿಚಿತ್ರಗಳಿಂದ ಆವೃತವಾದ ಕಾರಂಜಿಯನ್ನು ಒಳಗೊಂಡಿದೆ. ಕಾಶಿ ಕಾರಿಡಾರ್‌ ಮಾದರಿಯಲ್ಲೇ ಮಹಾಕಾಲೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯವನ್ನು ಒದಗಿಸಲು ಇದನ್ನು ನಿರ್ಮಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!