ವೈಟ್‌ಫೀಲ್ಡ್‌ ನಿಂದ ಕೃಷ್ಣರಾಜಪುರ ವರೆಗಿನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಅನೇಕ ಉದ್ಯೋಗಿಗಳು ಸೇರಿದಂತೆ ಇಡೀ ಬೆಂಗಳೂರಿಗರೇ ಕಾತುರದಿಂದ ಕಾಯುತ್ತಿದ್ದ ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ.

ಕರ್ನಾಟಕಕ್ಕೆ ಮೋದಿಯವರು ಹಲವು ಅಭಿವೃದ್ಧಿ ಯೋಜನೆಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದರು. ಈ ವೇಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಬಳಿಕ ಬೆಂಗಳೂರಿಗೆ ಆಗಮಿಸಿ ವೈಟ್​​ಫೀಲ್ಡ್​​ನಲ್ಲಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದರು. ತದನಂತರ ಅದೇ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.

4,500 ಕೋಟಿ ರೂ. ವೆಚ್ಚದಲ್ಲಿ ವೈಟ್‌ಫೀಲ್ಡ್‌ ನಿಂದ ಕೃಷ್ಣರಾಜಪುರ ವರೆಗೆ ನಿರ್ಮಾಣವಾಗಿರುವ ನೂತನ ಮೆಟ್ರೋ ಮಾರ್ಗವು 12 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!