ಉಪರಾಷ್ಟ್ರಪತಿ ಜಗದೀಪ್ ಧನಕರ್​ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಉಪರಾಷ್ಟ್ರಪತಿ, ಜಗದೀಪ್ ಧನಕರ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಧನಕರ್ ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯ ವಿಚಾರಿಸಿದ್ದೇನೆ. ಜಗದೀಪ್ ಧನಕರ್ ಉತ್ತಮ ಆರೋಗ್ಯಕ್ಕಾಗಿ ಹಾಗೂ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೀಗ ಬಂದ ಮಾಹಿತಿ ಪ್ರಕಾರ ಧನಕರ್ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಮುಂದುವರಿಸಲಾಗಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!