ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಬೆನ್ನಲ್ಲೆ ರಾಜ್ಯದ ಕಾರ್ಯಕರ್ತರೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ರಾಜ್ಯದ ಎಲ್ಲ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ನಮೋ ಆ್ಯಪ್’ ಮೂಲಕ ಸಂವಾದ ನಡೆಸಲಿದ್ದಾರೆ.

ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ಇದಕ್ಕಾಗಿ 24 ಲಕ್ಷ ಕಾರ್ಯಕರ್ತರು ‘ನಮೋ ಆ್ಯಪ್’ ಡೌನ್’ಲೋಡ್ ಮಾಡಿಕೊಂಡಿದ್ದಾರೆ. ಈ ವೇಳೆ ನರೇಂದ್ರ ಮೋದಿಯವರು ಸ್ಪೂರ್ತಿದಾಯಕ ಮಾತುಗಳನ್ನಾಡಲಿದ್ದಾರೆ. ಡಬಲ್ ಇಂಜಿನ್ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

ರಾಜ್ಯದ 58,112 ಬೂತ್‌ಗಳು ಹಾಗೂ 1,680 ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಈ ಸಂವಾದ ಹಮ್ಮಿಕೊಳ್ಳಲಾಗಿದೆ. ಬೂತ್‌ಗಳಲ್ಲಿ ಟೀವಿಗಳು ಹಾಗೂ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಎಲ್‌ಇಡಿ ಸ್ಕ್ರೀನ್‌ ಅಳವಡಿಸಲಾಗುವುದು. ಜನ ಮೋದಿ ಮಾತನ್ನು ತಮ್ಮ ಸ್ಥಳಗಳಿಂದಲೇ ಕೇಳಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಹೊಸ ತಂತ್ರಜ್ಞಾನ ಬಳಸಿಕೊಂಡು ನೇರ ಸಂವಾದ ಏರ್ಪಡಿಸಲಾಗಿದೆ. ‘ನಮೋ ಆ್ಯಪ್’ಗಳ ಮುಖಾಂತರ ಕಾರ್ಯಕರ್ತರು ಬೂತ್‌ ಮಟ್ಟದ 58 ಸಾವಿರ ಸ್ಥಳಗಳಲ್ಲಿ ಸಂವಾದ ವೀಕ್ಷಿಸಲಿದ್ದಾರೆ ಎಂದು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರೂ ಆಗಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಮಾಹಿತಿ ನೀಡಿದ್ದಾರೆ.

ಎಲ್‌ಇಡಿ ಸ್ಕ್ರೀನ್‌ ಇರುವ ಕಡೆ ಕಾರ್ಯಕರ್ತನ್ನು ಸೇರಿಸಲಾಗುತ್ತಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಸುಮಾರು 58 ಸಾವಿರ ಕಾರ್ಯಕರ್ತರು ಹಾಗೂ ಬೂತ್‌ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!