ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಹ್ವಾನಿಸಿದ್ದಾರೆ
ಕೇಂದ್ರ ಸರ್ಕಾರದ `ಮೇರಿ ಮಾಟಿ, ಮೇರಾ ದೇಶ’ ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‍ಎಸ್‍ಎಸ್ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, 50 ಗಿಡಗಳನ್ನು ನೆಟ್ಟು ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.
ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿದ್ದಕ್ಕೆ ವಿದ್ಯಾರ್ಥಿಗಳು ಖುಷಿಪಟ್ಟಿದ್ದು, ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಉತ್ಸುಕರಾಗಿದ್ದಾರೆ.