ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆ. 27 ಕ್ಕೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬೆಳಗಾವಿಯ ಹೈಟೆಕ್ ರೈಲ್ವೆ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಅದೇ ದಿನದಂದು ಬೆಳಗ್ಗೆ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ತದನಂತರ ಬೆಳಗಾವಿಗೆ ಆಗಮಿಸಿ ಹೈಟೆಕ್ ರೈಲು ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.