ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 150 ಕೋಟಿ ಜನ, ಏಕಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತೀರ್ಮಾನಕ್ಕೆ ಬದ್ಧರಾಗಿರಬೇಕು. ಆಗ ಮಾತ್ರ ಇಂತಹ ದುರ್ಘಟನೆ ನಡೆಯುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಹಾಸನ ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ ಉದ್ಘಾಟನಾ ಮಹೋತ್ಸವ ಹಾಗೂ ಮಹಾಕುಂಭಾಭಿಷೇಕ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಹತ್ಯೆ ಮಾಡಿದಂತಹ ಉಗ್ರಗಾಮಿಗಳನ್ನು ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ ಎಂದು ಹೇಳಿದರು.
ಇದು ಸೂಕ್ಷ್ಮವಾದ ವಿಚಾರ. ಇದರ ಕುರಿತು ಕೇಂದ್ರ ಕೈಗೊಳ್ಳುವ ಕ್ರಮಕ್ಕೆ ನನ್ನದು, ನನ್ನ ಪಕ್ಷದ್ದು ಪೂರ್ಣ ಬೆಂಬಲವಿದೆ ಎಂದು ಈಗಾಗಲೇ ಹೇಳಿದ್ದೇನೆ. ಮುಂದೆ ಕೂಡ ಏನು ಕ್ರಮ ತೆಗೆದುಕೊಳ್ಳುತ್ತಾರೋ ಆ ಕ್ರಮಕ್ಕೆ ಇಡೀ ದೇಶ ಪಕ್ಷ ಭೇದ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ಮುಂದೆ ಇಂತಹ ದುಷ್ಕ್ರತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದು, ಅವರ ಹಿಂದೆ ನಿಲ್ಲುತ್ತೇವೆ ಎಂದರು. ಇ