ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಯತ್ನದ ಕುರಿತು ತಮ್ಮ ಮೊದಲ ಪ್ರತಿಕ್ರಿಯೆಯಾಗಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಮೇಲಿನ ದಾಳಿಯಿಂದ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಬರೆದಿದ್ದಾರೆ.
“ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೇರಿಕನ್ ಜನರೊಂದಿಗೆ ಇವೆ” ಎಂದು ಅವರು ಹೇಳಿದರು.