Tuesday, March 21, 2023

Latest Posts

ಬಂಡೀಪುರ ಅರಣ್ಯ ಇಲಾಖೆ ಕಾರ್ಯಕ್ಕೆ ಮನಸೋತ ಪ್ರಧಾನಿ ಮೋದಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಡೀಪುರ ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯಾಚರಣೆಯೊಂದರಿಂದ ಆನೆಯೊಂದರ ಜೀವ ಉಳಿದಿದ್ದು, ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿಗೆ ಆನೆ ಬಂದಿತ್ತು.

ಅಕ್ರಮ ವಿದ್ಯುತ್ ಪ್ರವಹಿಸಿ ಆನೆ ನರಳಾಡುತ್ತಿತ್ತು. ಇದರ ಬಗ್ಗೆ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರು ಸ್ಥಳಕ್ಕೆ ಆಗಮಿಸಿ, ಸತತ ನಾಲ್ಕು ಗಂಟೆ ಚಿಕಿತ್ಸೆ ನೀಡಿದ್ದಾರೆ.

ಈ ಬಗ್ಗೆ ಅರಣ್ಯ ಸಚಿವ ಭೂಪೇಂದ್ರ ಯಾದವ್ ಟ್ವೀಟ್ ಮಾಡಿ ಬಂಡೀಪುರ ಅರಣ್ಯ ಇಲಾಖೆ ಕಾರ್ಯವನ್ನು ಶ್ಲಾಘಿಸಿದ್ದರು, ಇದನ್ನು ಪ್ರಧಾನಿ ಮೋದಿ ಅವರು ಗಮನಿಸಿ, ಮರು ಟ್ವೀಟ್ ಮಾಡಿ ಅರಣ್ಯ ಇಲಾಖೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!