ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಮತ್ತೊಮ್ಮೆ ಮೋಡಿ ಮಾಡಿದ್ದಾರೆ.
ಮೋಸ್ಟ್ ಪಾಪ್ಯುಲರ್ ಲೀಡರ್, ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅಗ್ರಸ್ಥಾನದಲ್ಲಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಹಾಗೂ ರಿಷಿ ಸುನಕ್‌ರನ್ನು ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಹಿಂದಿಕ್ಕಿದ್ದು, ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಜಾಗತಿಕ ನಾಯಕರ ನಿರ್ಧಾರಗಳು, ಅವರ ಜನಪ್ರಿಯತೆ ಆಧಾರದ ಮೇಲೆ ಗುಪ್ತಚರ ಸಂಸ್ಥೆಯಾದ ಮಾರ್ನಿಂಗ್ ಕನ್ಸಲ್ಟ್ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಪ್ರಧಾನಿ ಮೋದಿ ಅವರು ಶೇ.76 ರ ಅನುಮೋದನೆ ರೇಟಿಂಗ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಮೆಕ್ಸಿಕನ್ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಎರಡನೇ ಸ್ಥಾನದಲ್ಲಿ ಇದ್ದಾರೆ.
PM @NarendraModi ji remains the most loved, admired & trusted global leader. pic.twitter.com/5mmOITEmf4
— Piyush Goyal (@PiyushGoyal) April 2, 2023