ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಅಧ್ಯಕ್ಷ ವ್ಲಾಡಮಿರ್ ಝೆಲೆನ್ಸ್ಕ ಅವರನ್ನು ಭೇಟಿಯಾದರು. ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ.
ಪೋಲೆಂಡ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದರು.