April 15, 2026
Wednesday, April 15, 2026
spot_img

HALಗೆ ಬಂದಿಳಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಭವ್ಯ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಈಗಾಗಲೇ ಬೆಂಗಳೂರಿನ ಎಚ್‌ಎಎಲ್‌ಗೆ ಬಂದಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು ನಮೋಗೆ ಭವ್ಯ ಸ್ವಾಗತ ನೀಡಿದ್ದಾರೆ.

ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಈಗಾಗಲೇ ಬೆಂಗಳೂರಿನ ಎಚ್‌ಎಎಲ್‌ಗೆ ಬಂದಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು ನಮೋಗೆ ಭವ್ಯ ಸ್ವಾಗತ ನೀಡಿದ್ದಾರೆ.

ಇದೀಗ ಎಚ್‌ಎಎಲ್‌ನಿಂದ ಪ್ರಧಾನಿ ಆದಿಚುಂಚನಗಿರಿಯತ್ತ ಪ್ರಯಾಣ ಬೆಳೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !