ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ವಿರೋಧ ಮಾಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಬಿಹಾರದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಅಂಬೇಡ್ಕರ್ ಇಲ್ಲದಿದ್ದರೆ ನೆಹರು ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕೋಟಾಗಳನ್ನು ಎಂದಿಗೂ ಒಪ್ಪುತ್ತಿರಲಿಲ್ಲ,” ಎಂದು ಹೇಳಿದರು. ನೆಹರೂ ಅವರು ಅಂದಿನ ಪ್ರಧಾನಿಗಳಿಗೆ ಬರೆದ ಪತ್ರದಲ್ಲಿ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ ನಂತರ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಮೂಲಕ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಬಹುದು ಎಂದು “ಸುಳ್ಳು” ಹರಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.
ಹಿಂದುಳಿದ ಜಾತಿಗಳ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ ನಿಜ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಮಾತ್ರ ರಕ್ಷಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.