ಆಯುಷ್ಮಾನ್ ಕಾರ್ಡ್ ಹಂಚಿಕೆಗೆ ಪ್ರಧಾನಿ ಮೋದಿ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಆಯುಷ್ಮಾನ್ ಕಾರ್ಡ್’ಗಳನ್ನ ವಿತರಣೆಗೆ ಚಾಲನೆ ನೀಡಿದರು.
ಆಯುಷ್ಮಾನ್ ಭಾರತ್ ಯೋಜನೆಯು ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದ್ದು, ಈ ಯೋಜನೆಯಡಿ ಸರ್ಕಾರವು ದೇಶದ ಬಡ ವರ್ಗಗಳಿಗೆ ಉಚಿತ ಚಿಕಿತ್ಸೆಯನ್ನು ಒದಗಿಸುತ್ತದೆ. ಯೋಜನೆಯನ್ನ ಪಡೆಯಲು ಸರ್ಕಾರವು ಪ್ರತಿಯೊಬ್ಬ ಫಲಾನುಭವಿಗೆ ಆಯುಷ್ಮಾನ್ ಕಾರ್ಡ್ ನೀಡುತ್ತಿದೆ.
ಆಯುಷ್ಮಾನ್ ಯೋಜನೆಯಡಿ ಅರ್ಹ ಜನರಿಗೆ 5 ಲಕ್ಷದವರೆಗೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!