ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಿ ಮೋದಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬರೋಬ್ಬರಿ 4,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ ನೀಡಲಿದ್ದಾರೆ. ಇಷ್ಟೇ ಅಲ್ಲದೆ, ವಸತಿ ಯೋಜನೆ ಅನ್ವಯ ತಲೆ ಮೇಲೆ ಸೂರಿಲ್ಲದ 19,000 ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಮನೆಗಳನ್ನು ನಿರ್ಮಿಸಿದ್ದು, ಇವುಗಳನ್ನು ಹಸ್ತಾಂತರಿಸಲಾಗುತ್ತದೆ.
ಗಾಂಧಿನಗರಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, 2,450 ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಗುಜರಾತ್‌ನ ಗಿಫ್ಟ್ ಸಿಟಿಗೆ ಭೇಟಿ ನೀಡಿ, ನಡೆಯುತ್ತಿರುವ ಯೋಜನೆಗಳ ಪರಿಶೀಲನೆ ನಡೆಸಿ, ಸಂವಾದ ನಡೆಸಲಿದ್ದಾರೆ.