ವಾಣಿಜ್ಯ ನಗರಿ ಮುಂಬೈಯಲ್ಲಿ 29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಣಿಜ್ಯ ನಗರಿ ಮುಂಬೈಯ ರಸ್ತೆ, ರೈಲ್ವೆ, ಬಂದರು ವಲಯಗಳಲ್ಲಿ 29,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ, ‘ಮಹಾರಾಷ್ಟ್ರವನ್ನು ವಿಶ್ವದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಮತ್ತು ಮುಂಬೈಯನ್ನು ಜಾಗತಿಕ ‘ಫಿನ್‌ಟೆಕ್’ ರಾಜಧಾನಿಯನ್ನಾಗಿ ಮಾಡುವುದು ನನ್ನ ಗುರಿಯಾಗಿದೆ’ ಎಂದು ಹೇಳಿದ್ದಾರೆ.

ಅವಳಿ ಸುರಂಗ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರಲ್ಲಿ ₹16,600 ಕೋಟಿ ಮೌಲ್ಯದ ಥಾಣೆ-ಬೊರಿವಲಿ ಸುರಂಗ ಮಾರ್ಗದ ಯೋಜನೆ ಹಾಗೂ ₹6,300 ಕೋಟಿ ಮೌಲ್ಯದ ಗೋರೆಗಾಂವ್-ಮುಲುಂಡ್ ಲಿಂಕ್ ರೋಡ್ (ಜಿಎಂಎಲ್‌ಆರ್) ಸುರಂಗ ಯೋಜನೆ ಒಳಗೊಂಡಿದೆ.

₹5,600 ಕೋಟಿ ಮೌಲ್ಯದ ‘ಮುಖ್ಯಮಂತ್ರಿ ಯುವ ಕಾರ್ಯ ಪ್ರಶಿಕ್ಷಣ ಯೋಜನೆ’ಗೂ ಪ್ರಧಾನಿ ಚಾಲನೆ ನೀಡಿದ್ದಾರೆ.

ಈ ವೇಳೆ ಲೋಕಮಾನ್ಯ ತಿಲಕ್ ಟರ್ಮಿನಸ್‌ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಹೊಸ ಫ್ಲ್ಯಾಟ್‌ಫಾರ್ಮ್ ಅನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!