ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನಲ್ಲಿ ಸುಮಾರು 80,000 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಈ ಯೋಜನೆಯು ಸುಮಾರು 63,000 ಬುಡಕಟ್ಟು ಜನರಿರುವ ಹಳ್ಳಿಗಳ ಅಭಿವೃದ್ಧಿಗೆ ಒಳಪಡಲಿದೆ. 5 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
‘ಇಂದು ನಾನು ಸುಮಾರು 80,000 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನವನ್ನು ಉದ್ಘಾಟಿಸಿದೆ. ಈ ಯೋಜನೆಯು ಸುಮಾರು 63,000 ಬುಡಕಟ್ಟು ಹಳ್ಳಿಗಳ ಅಭಿವೃದ್ಧಿಗೆ ಒಳಪಡುತ್ತದೆ. ಇದು 5 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಭಗವಾನ್ ಬಿರ್ಸಾ ಮುಂಡಾ ಭೂಮಿಯಿಂದ ಪ್ರಾರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ’ ಎಂದು ಮೋದಿ ಹೇಳಿದ್ದಾರೆ.
‘ಬುಡಕಟ್ಟು ಜನಾಂಗದ ಯುವಕರಿಗೆ ಉತ್ತಮ ಶಿಕ್ಷಣದ ಅವಕಾಶ ಸಿಕ್ಕಾಗ ನಮ್ಮ ಬುಡಕಟ್ಟು ಸಮುದಾಯವು ಪ್ರಗತಿ ಹೊಂದುತ್ತದೆ. ಇದಕ್ಕಾಗಿ ನಮ್ಮ ಸರ್ಕಾರವು ಬುಡಕಟ್ಟು ಪ್ರದೇಶಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಲು ಶ್ರಮಿಸುತ್ತಿದೆ. 40 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು (ಇಎಂಆರ್‌ಎಸ್) ಉದ್ಘಾಟಿಸಲಾಗುತ್ತಿದೆ. 25 ಇಎಂಆರ್‌ಎಸ್‌ಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.
ಇದರ ಜೊತೆಗೆ ಪ್ರಧಾನಿ ಮೋದಿ ಅವರು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ 83,300 ಕೋಟಿ ರೂಪಾಯಿಗಳ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಿದರು.
ಬುಡಕಟ್ಟು ಸಮುದಾಯಗಳಿಗೆ ಶೈಕ್ಷಣಿಕ ಮೂಲಸೌಕರ್ಯವನ್ನು ಉತ್ತೇಜಿಸುವ ಸಲುವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ 40 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು (EMRS) ಉದ್ಘಾಟಿಸಿದರು ಮತ್ತು 2,800 ಕೋಟಿ ರೂ.ಗಳ ಮೌಲ್ಯದ 25 EMRS ಗೆ ಶಂಕುಸ್ಥಾಪನೆ ಮಾಡಿದರು.