Tuesday, October 3, 2023

Latest Posts

‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಇಂದು ‘13,000 ಕೋಟಿ ರೂ.ಗಳ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಭಾನುವಾರ ಚಾಲನೆ ನೀಡಿದರು.

ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ ಮೋದಿ ಅವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದರು.

ಈ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಇಂದು
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಈ ಯೋಜನೆಗಾಗಿ ಕೇಂದ್ರ ಸರ್ಕಾರ 13,000 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. ಈ ಯೋಜನೆ ಅಡಿ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು ಮತ್ತು ಕ್ಷೌರಿಕರು ಸೇರಿದಂತೆ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲತೆಯಲ್ಲಿ ತೊಡಗಿರುವ ಸುಮಾರು 30 ಲಕ್ಷ ಕುಟುಂಬಗಳಿಗೆ ಶೇ.5 ರಷ್ಟು ರಿಯಾಯಿತಿ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಕರ್ಮಿಗಳು ನೀಡುವ ಉತ್ಪನ್ನಗಳು ಹಾಗೂ ಸೇವೆಗಳ ಲಭ್ಯತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದು ಯೋಜನೆಯ ಗುರಿಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!