ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತೆಲಂಗಾಣದ ಸಿಕಂದರಾಬಾದ್ (Secunderabad) ಮತ್ತು ಆಂಧ್ರಪ್ರದೇಶದ ವಿಶಾಖಪಟ್ಟಣಂ (Visakhapatnam) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ (Vande Bharat Express) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಫ್ಲ್ಯಾಗ್ ಆಫ್ ಮಾಡಲು ಸಂತೋಷವಾಗಿದೆ. ಇದು ‘ಈಸ್ ಆಫ್ ಲಿವಿಂಗ್’ ಅನ್ನು ಹೆಚ್ಚಿಸುತ್ತದೆ, ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಆರ್ಥಿಕತೆಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ರೈಲು ಹೊಸ ಭಾರತದ ನಿರ್ಣಯಗಳು ಮತ್ತು ಸಾಮರ್ಥ್ಯದ ಸಂಕೇತವಾಗಿದೆ. ಇದು ಕ್ಷಿಪ್ರ ಬದಲಾವಣೆಯ ಹಾದಿಯಲ್ಲಿ ಪ್ರಾರಂಭವಾದ ಭಾರತದ ಸಂಕೇತವಾಗಿದೆ. ಭಾರತವು ತನ್ನ ಗುರಿಯನ್ನು ತ್ವರಿತವಾಗಿ ತಲುಪಲು ಬಯಸುತ್ತದೆ ಎಂದಿದ್ದಾರೆ.

ಎರಡು ತೆಲುಗು ರಾಜ್ಯಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಎಂಟು ಗಂಟೆ 30 ನಿಮಿಷಗಳಲ್ಲಿ ಸಂಪೂರ್ಣ ದೂರವನ್ನು ಕ್ರಮಿಸುವ ನಿರೀಕ್ಷೆಯಿದೆ. ಜನವರಿ 16 ರಿಂದ ರೈಲು ಸಂಚಾರ ಆರಂಭವಾಗಲಿದ್ದು, ಬುಕಿಂಗ್ ಶನಿವಾರ ಆರಂಭವಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!