ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಪ್ರಧಾನಿ ಭೇಟಿ ವಿಶೇಷವಾಗಿ ಭಾರತೀಯ ವಲಸಿಗ ಸಮುದಾಯದ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತದೆ ಎನ್ನಲಾಗಿದೆ. ಭಾರತವು ಬ್ರೂನಿಯಿಂದ ಹೈಡ್ರೋಕಾರ್ಬನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದೆ.
ಇದಾದ ನಂತರ ಪ್ರಧಾನಿ ಮೋದಿ ಬ್ರೂನಿಯಿಂದ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ಸಿಂಗಾಪುರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ. ಆಸಿಯಾನ್ ಚೌಕಟ್ಟಿನಡಿಯಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ್ದರು.