ಲೋಕಸಭಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣಾ ಪ್ರಚಾರ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಅಂದರೆ ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ.

73 ವರ್ಷದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಸ್ಮಾರಕದಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿಗಳು ಎರಡು ದಿನ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್‌ನಲ್ಲಿ (Vivekananda Rock Memorial Hall) ಧ್ಯಾನ ಮಾಡಲಿದ್ದಾರೆ. ಜೂನ್ 1ರಂದು ಕನ್ಯಾಕುಮಾರಿಯಿಂದ ಹಿಂದಿರುಗುವ ಸಾಧ್ಯತೆಗಳಿವೆ.

ಕನ್ಯಾಕುಮಾರಿಯ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ.

2019ರ ಲೋಕಸಭಾ ಚುನಾವಣೆಯ ಫಲಿತಾಂಶದ ಕೆಲದಿನಗಳ ಕೇದರಾನಾಥ ದೇಗುಲ ವ್ಯಾಪ್ತಿಯ ಹಿಮಾಲಯದ 11,700 ಅಡಿ ಎತ್ತರದ ರುದ್ರ ಗುಹೆಯೊಂದರಲ್ಲಿ ಪ್ರಧಾನಿಗಳು ಎರಡು ದಿನ ಧ್ಯಾನ ಮಾಡಿದ್ದರು. ಈ ಗುಹೆ ಪ್ರವಾಸಿತಾಣವಾಗಿ ಬದಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!