ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ, ‘ಎಂ. ವೆಂಕಯ್ಯ ನಾಯ್ಡು ಅವರನ್ನು ಇಂದು ಭೇಟಿ ಮಾಡಿದ್ದೇನೆ. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ಭಾರತದ ಪ್ರಗತಿಗಾಗಿ ಅವರ ಬುದ್ಧಿವಂತಿಕೆ ಮತ್ತು ಉತ್ಸಾಹದ ಬಗ್ಗೆ ಯಾವಾಗಲೂ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೆ’ ಎಂದು ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ವೆಂಕಯ್ಯ ನಾಯ್ಡು ಅವರು ಕೂಡ ಎಕ್ಸ್‌ನಲ್ಲಿ ಬರೆದಿದ್ದಾರೆ. ”ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಭಾಯಿ ಅವರಿಗೆ ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದೇನೆ. ನಮ್ಮ ಮಾತುಕತೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ’ ಎಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮುಂಬರುವ ವರ್ಷಗಳಲ್ಲಿ ಮೋದಿ ಅವರ ನಾಯಕತ್ವದಲ್ಲಿ ಭಾರತ ವೈಭವದ ಹೊಸ ಎತ್ತರಗಳನ್ನು ಏರುತ್ತಿರುವುದು ನನಗೆ ಖಚಿತವಾಗಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬರೆದಿದ್ದಾರೆ.