ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವರನ್ನು ಭೇಟಿ ಮಾಡಿ ದೀರ್ಘಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಭೆಯ ಕುರಿತು ಮೋದಿ ಅವರು ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರಧಾನಮಂತ್ರಿ ಬರೆದಿದ್ದಾರೆ, “ಸಚಿವ ಪರಿಷತ್ತಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವರಾದವರನ್ನು ಭೇಟಿಯಾದೆ ಅವರು ತಮ್ಮ ಸಚಿವ ಪ್ರಯಾಣವನ್ನು ಪ್ರಾರಂಭಿಸಿದಾಗ ಅವರ ಅನುಭವಗಳು ಮತ್ತು ಒಳನೋಟಗಳನ್ನು ಕೇಳಿ ತಿಳಿದುಕೊಂಡೆ. ತಳಮಟ್ಟದಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಲಾಗಿದೆ” ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ಅವರ ಸಚಿವರ ತಂಡದ 71 ಸದಸ್ಯರು ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಂಡವು 30 ಕ್ಯಾಬಿನೆಟ್ ಸಚಿವರು, ಐದು ರಾಜ್ಯ ಸಚಿವರು ಮತ್ತು 36 ರಾಜ್ಯ ಸಚಿವರನ್ನು ಹೊಂದಿದೆ.