ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ಪ್ಯಾರಿಸ್‌ಗೆ ಬಂದಿಳಿದ ಮೋದಿಗೆ ರೆಡ್ ಕಾರ್ಪೆಟ್ ಮೂಲಕ ಸ್ವಾಗತ ಕೋರಲಾಗಿದೆ. ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೊರ್ನೆ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಮೋದಿಯನ್ನು ಬರಮಾಡಿಕೊಂಡಿದ್ದಾರೆ. ಬಳಿಕ ಫ್ರಾನ್ಸ್ ಸೇನಾ ತುಕಡಿಗಳು ಮೋದಿಗೆ ಗೌರವ ನೀಡಿದೆ.
ಇಂದು ಮೋದಿಗೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಔತಣಕೂಟ ಆಯೋಜಿಸಿದ್ದಾರೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ಫ್ರೆಂಚ್ ರಾಷ್ಟ್ರೀಯ ದಿನ ಬಾಸ್ಟಿಲ್ ದಿನಾಚರಣೆಯಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ದಿನಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನವು ವೈಮಾನಿಕ ಪ್ರದರ್ಶನ ನೀಡಲಿದೆ. ಮತ್ತೊಂದು ವಿಶೇಷತೆ ಎಂದರೆ ಭಾರತ ಹಾಗೂ ಫ್ರಾನ್ಸ್ ಪಾಲುದಾರಿಗೆ 25ನೇ ವಾರ್ಷಿಕೋತ್ಸವದ ಸಂಭ್ರಮ. ಭಾರತ ಹಾಗೂ ಫ್ರಾನ್ಸ್ ರಕ್ಷಣೆ, ವ್ಯಾಪಾರ, ಹೂಡಿಕೆ, ಶಿಕ್ಷಣ, ಬಾಹ್ಯಾಕಾಶ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನದ ಫ್ರಾನ್ಸ್ ಭೇಟಿಯಲ್ಲಿ ಹಲವು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.