Tuesday, May 30, 2023

Latest Posts

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ, ಕಾಮಗಾರಿ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿದ್ದು, ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.

ಕಟ್ಟಡದೊಳಗೆ ಕಾಮಗಾರಿ ಪರಿಶೀಲನೆ ಮಾಡುತ್ತಾ ಒಂದು ಗಂಟೆಗೂ ಹೆಚ್ಚಿನ ಸಮಯ ಕಳೆದಿದ್ದು, ಕಾರ್ಮಿಕರೊಡನೆ ಸಂವಾದ ನಡೆಸಿದ್ದಾರೆ.

ಪ್ರಧಾನಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಗಮಿಸಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ಸಂಕ್ಷಿಪ್ತ ಸೌಲಭ್ಯಗಳನ್ನು ವೀಕ್ಷಣೆ ಮಾಡಿದ್ದಾರೆ. ಸಂಸತ್ ಭವನ ಕಳೆದ ವರ್ಷದ ನವೆಂಬರ್ ವೇಳೆಗೆ ಪೂರ್ಣವಾಗಬೇಕಿತ್ತು. ಆದರೆ ಇನ್ನೇನು ಕಾಮಗಾರಿ ಸಂಪೂರ್ಣವಾಗಿದ್ದು, ನೂತನ ಕಟ್ಟಡ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ.

ಸಂಸತ್ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಕೊಠಡಿ ಹಾಗೂ ಪಾರ್ಕಿಂಗ್ ಸ್ಥಳಾವಕಾಶ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!