ಹೊಸದಿಗಂತ ಡಿಜಿಟಲ್ ಡೆಸ್ಕ್:
ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂದು (ಜೂನ್ 4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಮುಂಜಾನೆ ಬಾರ್ಬಡೋಸ್‌ನಿಂದ ದೆಹಲಿಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿ ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸವನ್ನು ತಲುಪಿದರು. ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಉಪಸ್ಥಿತರಿದ್ದರು.
ವಿಶ್ವಕಪ್ ಗೆದ್ದ ಟೀಂ ಇಂಡಿಯಾವನ್ನು ಶ್ಲಾಘಿಸಿದ ಪ್ರಧಾನಿ ಮೋದಿ ಜತೆ ಭಾರತ ತಂಡದ ಆಟಗಾರರು ಟಿ20 ವಿಶ್ವಕಪ್ ವೀಕ್ಷಿಸುತ್ತಿರುವ ಛಾಯಾಚಿತ್ರಗಳನ್ನು ಕ್ಲಿಕ್ಕಿಸಿಕೊಂಡರು. ಇದೀಗ ಪ್ರಧಾನಿ ನರೇಂದ್ರ ಮೋದಿ ಭಾರತ ತಂಡದ ಆಟಗಾರರನ್ನು ಭೇಟಿ ಮಾಡಿರುವ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.