ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ‘5ಟಿ’ ಸೂತ್ರವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ನಿರ್ವಹಣೆಗೆ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ ಸೂತ್ರವನ್ನು ರಾಜ್ಯ ಅಳವಡಿಸಿಕೊಂಡಿದ್ದು, ನಿನ್ನೆ ನಡೆದ ಸಭೆಯಲ್ಲಿ ಈ ಸೂತ್ರಕ್ಕೆ ಮೆಚ್ಚುಗೆ ಸಿಕ್ಕಿದೆ ಎಂದು ಸಿಎಂ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಬಗ್ಗೆ ಮಾತನಾಡಿದ್ದರು. ಈ ವೇಳೆ ನಮ್ಮ ರಾಜ್ಯದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು ಎಂದಿದ್ದಾರೆ.
ಆಕ್ಸಿಜನ್ ಬೆಡ್‌ಗಳು ಮತ್ತು ಆಕ್ಸಿಜನ್ ಪ್ಲಾಂಟ್‌ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಗಿದೆ ಎಂದು ತಿಳಿಸಿದ್ದಾರೆ.