ವಿದ್ಯಾರಣ್ಯಪುರ ಪೊಲೀಸರ ವಿರುದ್ಧ ಪ್ರಧಾನಿ ಮೋದಿಗೆ ಬಂತು ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
 
ಬೆಂಗಳೂರು ಪೊಲೀಸರ (Bengaluru Police) ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮಿತ್ ಶಾ (Amit Shah) ಅವರಿಗೆ ಸಾಮಾನ್ಯ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ಗಾಂಜಾ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬರನ್ನು ವಿಚಾರಣೆ ನಡೆಸಿದ್ದ ನಗರದ ವಿದ್ಯಾರಣ್ಯಪುರ ಠಾಣಾ ಪೊಲೀಸರು (Vidyaranyapura Police Station) ಲಂಚ ಸ್ವೀಕರಿಸಿದ್ದಾಗಿ ಮೆಂಟಲ್ ಜಿ.ಎಂ.ಆಸೀಫ್ ಎಂಬ ಟ್ವಿಟ್ಟರ್ ಅಕೌಂಟ್​ನಿಂದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಫೋನ್​ಪೇ ಮೂಲಕ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಷ್ಟಕ್ಕೂ ಸುಮ್ಮನಾಗದ ಪೊಲೀಸರು, ಸದರಿ ವ್ಯಕ್ತಿಯ ಬಳಿ ಮತ್ತೆ ಹಣಕ್ಕೆ ಬೇಡಿಕೆ ಇಟ್ಟು 15 ಸಾವಿರ ರೂ. ಫೋನ್ ಪೇ ಮೂಲಕ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ ನೊಂದ ವ್ಯಕ್ತಿಯ ಫೋನ್ ಪೇ ಮೂಲಕ ಪೊಲೀಸರಿಗೆ ಹಣ ವರ್ಗಾಯಿಸಿದ್ದರ ಸ್ಕ್ರೀನ್​ಶಾಟ್ ತೆಗೆದು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ, ಕೇಂದ್ರ ಗೃಹಸಚಿವರು, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!