ಸೌತ್ ಆಫ್ರಿಕಾದಲ್ಲಿ ಪ್ರಧಾನಿ ಮೋದಿಗೆ ಸಿಕ್ಕಿತು ಅದ್ಧೂರಿ ಸ್ವಾಗತ: ಕಾಲಿಗೆರಗಿ ಆಶೀರ್ವಾದ ಪಡೆದ ಭಾರತೀಯ ಸಮುದಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆಯಲ್ಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.

ಪ್ರಧಾನಿ ಮೋದಿ ಆಗಮನವಾಗುತ್ತಿದ್ದಂತೆ ಭಾರತೀಯ ಸಮುದಾಯ ಜಯಘೋಷ ಮೊಳಗಿಸಿದ್ದಾರೆ. ಪುಟಾಣಿಯೊಬ್ಬ ಆರತಿ ಬೆಳಗಿ ಮೋದಿಗೆ ಸ್ವಾಗತ ನೀಡಿದ್ದಾನೆ.

ಭಾರತೀಯ ಸಮುದಾಯದ ಉತ್ಸಾಹ, ಹಾಗೂ ಪ್ರೀತಿಗೆ ಮೋದಿ ಧನ್ಯವಾದ ಹೇಳಿದ್ದಾರೆ. ಎಲ್ಲರ ಕೈಕುಲುಕಿ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಲವರು ಪ್ರಧಾನಿ ಮೋದಿ ಪಾದಕ್ಕೆರಗಿ ನಮಸ್ಕರಿಸಿದ್ದಾರೆ.

ಸೌತ್ ಆಫ್ರಿಕಾ ಪ್ರವಾಸಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ಗ್ರೀಸ್ ಪ್ರಧಾನಮಂತ್ರಿ ಘನತೆವೆತ್ತ ಕಿರಿಯಾಕೋಸ್ ಮಿತ್ಸೋಟಾಕಿಸ್ ಆಹ್ವಾನದ ಮೇರೆಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ. ಬ್ರಿಕ್ಸ್ ಶೃಂಗಸಭೆ ಚಟುವಟಿಕೆ ಭಾಗವಾಗಿ ನಡೆಯಲಿರುವ ಬ್ರಿಕ್ಸ್-ಆಫ್ರಿಕಾ ಔಟ್‌ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಡೈಲಾಗ್ ಕಾರ್ಯಕ್ರಮಗಳಲ್ಲಿ ಸಹ ಭಾಗವಹಿಸುತ್ತೇನೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಹ್ವಾನಿಸಲಾದ ಹಲವಾರು ಅತಿಥಿ ದೇಶಗಳೊಂದಿಗೆ ಸಂವಹನ ನಡೆಸಲು ನಾನು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!