ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (CEC) ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆ ಭವ್ಯ ಸ್ವಾಗತ ನೀಡಲಾಯಿತು.
ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ ನಂತರ ಪ್ರಧಾನಿ ಮೋದಿ ಅವರು ಪಕ್ಷದ ಕಚೇರಿಗೆ ನೀಡಿದ ಮೊದಲ ಭೇಟಿ ಇದಾಗಿದ್ದು, ಈ ವೇಳೆ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಹೂವಿನ ಮಳೆ ಸುರಿಸುವ ಮೂಲಕ ಅದ್ದೂರಿ ಸ್ವಾಗತ ನೀಡಿದರು.